Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜೀವಂತವಾಗಿ ಉಳಿದವರು ತಮ್ಮ ವೈರಿಗಳ ದೇಶದಲ್ಲಿ ಅಧೈರ್ಯಗೊಳ್ಳುವರು. ಅವರು ಪ್ರತಿಯೊಂದಕ್ಕೂ ದಿಗಿಲುಪಡುವರು. ಗಾಳಿಯಿಂದ ತೂರಿಹೋಗುವ ಎಲೆಯ ಶಬ್ದಕ್ಕೆ ಅವರು ಓಡಿಹೋಗುವರು. ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುತ್ತಿದ್ದಾರೋ ಎಂಬಂತೆ ಅವರು ಓಡಿಹೋಗುವರು. ಯಾರೂ ಬೆನ್ನಟ್ಟದಿದ್ದಾಗಲೂ ಅವರು ಎಡವಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:36
31 ತಿಳಿವುಗಳ ಹೋಲಿಕೆ  

‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.


ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.


ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ.


ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು