Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯಾರೂ ಓಡಿಸದಿದ್ದರೂ ಕತ್ತಿಯ ಎದುರಿನಿಂದ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಎದುರಿನಲ್ಲಿ ನಿಲ್ಲಲಾರದವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಒಬ್ಬನು ಕತ್ತಿಯನ್ನು ಹಿಡಿದುಕೊಂಡು ಬೆನ್ನಟ್ಟುವಾಗ ಓಡಿಹೋಗುವಂತೆ ಅವರು ಓಡಿಹೋಗುವರು. ಯಾರೂ ಅವರನ್ನು ಬೆನ್ನಟ್ಟದಿದ್ದಾಗಲೂ ಅವರು ಒಬ್ಬರ ಮೇಲೊಬ್ಬರು ಬೀಳುವರು. “ನೀವು ನಿಮ್ಮ ವೈರಿಗಳ ವಿರುದ್ಧವಾಗಿ ನಿಲ್ಲುವಷ್ಟು ಶಕ್ತಿಯುಳ್ಳವರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:37
12 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಆದಕಾರಣ ಇಗೋ, ನಾನು ಈ ಜನರ ಮುಂದೆ ಅಡ್ಡಿಆತಂಕಗಳನ್ನು ಒಡ್ಡುವೆನು. ತಂದೆ ಮಕ್ಕಳು ಅವುಗಳನ್ನೂ ಎಡವುವರು, ನೆರೆಹೊರೆಯವರೂ ನಾಶವಾಗುವರು ಇದೇ ಯೆಹೋವನಾದ ನನ್ನ ಮಾತು” ಎಂದು ನುಡಿಯುತ್ತಾನೆ.


ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು; ‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.


ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.


ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು