Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:39
30 ತಿಳಿವುಗಳ ಹೋಲಿಕೆ  

ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”


“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


‘ಹೆತ್ತವರು ಹುಳಿದ್ರಾಕ್ಷಿಯನ್ನು ತಿಂದರು, ಅದರಿಂದ ಮಕ್ಕಳ ಹಲ್ಲುಗಳು ಚಳಿತುಹೋಗಿವೆ’ ಎಂದು ಆ ಕಾಲದಲ್ಲಿ ಜನರು ಮತ್ತೆ ಹೇಳುವುದಿಲ್ಲ.


ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


ಪೂರ್ವಿಕರ ಅಧರ್ಮದ ನಿಮಿತ್ತ ಅವನ ಮಕ್ಕಳಿಗೂ, ವಧ್ಯಸ್ಥಾನವನ್ನು ಸಿದ್ಧಮಾಡಿರಿ, ಅವರು ತಲೆಯೆತ್ತಿ, ಲೋಕವನ್ನು ವಶಪಡಿಸಿಕೊಂಡು ಭೂಮಂಡಲದ ಮೇಲೆಲ್ಲಾ ಪಟ್ಟಣಗಳನ್ನು ಕಟ್ಟಿಕೊಳ್ಳದಿರಲಿ.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು