Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:40
30 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಅವನು ಈ ವಿಷಯಗಳಲ್ಲಿ ಯಾವುದಾದರೂ ಒಂದರಲ್ಲಿ ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.


ಈಗ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರಮಾಡಿ, ನಿಮ್ಮ ಪಾಪಗಳನ್ನು ಅರಿಕೆಮಾಡಿ, ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಮತ್ತು ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ” ಎಂದನು.


ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.


ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು