Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನು ತಮಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶಕ್ಕೆ [ಸೆರೆಯವರನ್ನಾಗಿ] ಬರಮಾಡಬೇಕಾಯಿತೆಂದೂ ಒಪ್ಪಿ ತಮ್ಮ ಮೊಂಡವಾದ ಮನಸ್ಸನ್ನು ನನ್ನ ಆಜ್ಞೆಗೆ ಒಳಪಡಿಸಿ, ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:41
39 ತಿಳಿವುಗಳ ಹೋಲಿಕೆ  

‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ, ಯೆಹೋವನಿಗಾಗಿ ಸುನ್ನತಿ ಮಾಡಿಕೊಳ್ಳಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವುದು” ಎಂದು ಹೇಳುತ್ತಾನೆ.


ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.


ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.


ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.


ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.


ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.


ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.


ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು