Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:5
26 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಇಗೋ, ದಿನಗಳು ಬರುವವು, ಆ ಕಾಲದಲ್ಲಿ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿಯನ್ನು ತುಳಿಯುವವನು ಬಿತ್ತುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಸುವವು, ಎಲ್ಲಾ ಗುಡ್ಡಗಳು ಕರಗುವವು.


ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.


ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.


ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.


ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”


ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು