ಯಾಜಕಕಾಂಡ 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |