Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಓಡಿಸುವರು; ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಓಡಿಸುವರು; ನೀವು ನಿಮ್ಮ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಕೊಲ್ಲುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:8
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.


ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.


ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,


ಅದೇ ಮೇರೆಗೆ ರಾಜಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ಪ್ರಾಣ ರಕ್ಷಿಸಿಕೊಳ್ಳುವುದಕ್ಕಾಗಿ ಕೂಡಿಕೊಂಡು ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರ ಜನರನ್ನು ಸಂಹರಿಸಿದರು; ಆದರೆ ಸುಲಿಗೆಮಾಡುವುದಕ್ಕೆ ಕೈ ಹಾಕಲಿಲ್ಲ.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಇಸ್ರಾಯೇಲರ ಒಂದೊಂದು ಕುಲದಿಂದ ಸಾವಿರ ಜನ ಭಟರನ್ನು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಕಳುಹಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು