Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಒಂದು ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾವನಾದರೂ ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಬಿಡಿಸಿಕೊಳ್ಳಬೇಕೆಂದಿದ್ದರೆ ಅಷ್ಟರೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:31
5 ತಿಳಿವುಗಳ ಹೋಲಿಕೆ  

“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


ದನಗಳಾಗಲಿ ಇಲ್ಲವೇ ಹಿಂಡಿನ ಆಡು ಅಥವಾ ಕುರಿಗಳಾಗಲಿ ಕುರುಬನು ಲೆಕ್ಕಮಾಡಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.


ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಅಶುದ್ಧ ಪಶುವಿನಲ್ಲಿ ಚೊಚ್ಚಲಮರಿ ಹುಟ್ಟಿದ್ದಾದರೆ ಹರಕೆಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆ ಹೋದರೆ ಅದನ್ನು ನಿರ್ಣಯಿಸಲ್ಪಟ್ಟ ಕ್ರಯಕ್ಕೆ ಮಾರಬೇಕು.


ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು