ಯಾಜಕಕಾಂಡ 27:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಪಶುವು ಒಳ್ಳೇದೋ ಅಥವಾ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದೂ ಮತ್ತು ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನದಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆ ಪಶುಪ್ರಾಣಿ ಒಳ್ಳೆಯದೋ ಕೆಟ್ಟದ್ದೋ ಎಂದು ನೋಡಬಾರದು. ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದು ಹಾಗು ಅದಕ್ಕೆ ಬದಲಾಗಿ ಇಟ್ಟಿದ್ದು ಎರಡು ಸರ್ವೇಶ್ವರನದಾಗಿರಬೇಕು. ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.“ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆ ಪಶುವು ಒಳ್ಳೇದೋ ಕೆಟ್ಟದ್ದೋ ಎಂದು ನೋಡಬಾರದು; ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲಾಗಿ ಲೆಕ್ಕಿಸಿದ್ದೂ ಅದಕ್ಕೆ ಬದಲಾಗಿ ಇಟ್ಟದ್ದೂ ಎರಡೂ ಯೆಹೋವನವಾಗಿರಬೇಕು; ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆರಿಸಲ್ಪಟ್ಟ ಪಶುವು ಒಳ್ಳೆಯದೋ ಕೆಟ್ಟದ್ದೋ ಎಂದು ಅದರ ಮಾಲಿಕನು ಚಿಂತೆ ಮಾಡಬಾರದು. ಅವನು ಅದನ್ನು ಬದಲಾಯಿಸಬಾರದು. ಅವನು ಅದನ್ನು ಬದಲಾಯಿಸಲು ತೀರ್ಮಾನಿಸಿದರೆ, ಆಗ ಎರಡೂ ಪಶುಗಳು ಯೆಹೋವನದಾಗುತ್ತವೆ. ಆ ಪಶುವನ್ನು ಮರಳಿ ಕೊಂಡುಕೊಳ್ಳಲಾಗದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ” ಅಧ್ಯಾಯವನ್ನು ನೋಡಿ |