Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ತನ್ನ ಕೈಯನ್ನು ಆಡಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ಬಳಿಕ ಆರೋನನ ಗಂಡುಮಕ್ಕಳು ಆಡಿನ ರಕ್ತವನ್ನು ವೇದಿಕೆಯ ಮೇಲೆ ಅದರ ಸುತ್ತಲೂ ಚಿಮಿಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 3:13
15 ತಿಳಿವುಗಳ ಹೋಲಿಕೆ  

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.


ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,


ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು