Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು [ಅಭಿಷಿಕ್ತ ಯಾಜಕನ] ದೋಷಪರಿಹಾರಕಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಜಕನು ಪಾಪಪರಿಹಾರಕ ಯಜ್ಞದ ಹೋರಿಯ ಭಾಗಗಳನ್ನು ಸಮರ್ಪಿಸಿದಂತೆಯೇ ಈ ಭಾಗಗಳನ್ನು ಅರ್ಪಿಸಬೇಕು. ಈ ರೀತಿಯಾಗಿ, ಯಾಜಕನು ಜನರಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ದೇವರು ಅವರನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:20
28 ತಿಳಿವುಗಳ ಹೋಲಿಕೆ  

ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,


ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.


ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.


ಆ ದೋಷಪರಿಹಾರಕ ಯಜ್ಞದ ಹೋರಿಯ ಕೊಬ್ಬನ್ನೆಲ್ಲಾ ಅಂದರೆ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಕೊಬ್ಬನ್ನು,


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.


ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಎರಡನೆಯ ಪಕ್ಷಿಯನ್ನು ನಿಯಮಗಳಿಗೆ ಅನುಸಾರವಾಗಿ ಅದೇ ರೀತಿಯಲ್ಲಿ ಸರ್ವಾಂಗಹೋಮ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”


ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.


ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು