ಯಾಜಕಕಾಂಡ 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಸಮಾಧಾನಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನೂ ಪ್ರತ್ಯೇಕಿಸಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವದರಿಂದ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.