Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 4:7
17 ತಿಳಿವುಗಳ ಹೋಲಿಕೆ  

ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.


ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.


ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.


ಯೆಹೋವನೇ ದೇವರು; ಆತನು ನಮಗೆ ಪ್ರಕಾಶವನ್ನು ಅನುಗ್ರಹಿಸಿದ್ದಾನೆ. ರೆಂಬೆಗಳನ್ನು ಹಿಡಿದುಕೊಂಡು ಮೆರವಣಿಗೆಯಾಗಿ ಯಜ್ಞವೇದಿಯ ಕೊಂಬುಗಳ ಸಮೀಪಕ್ಕೆ ಬನ್ನಿರಿ.


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು