Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:11
23 ತಿಳಿವುಗಳ ಹೋಲಿಕೆ  

ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ.


ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.


ಅವನು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಅಥವಾ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.


ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.


ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.


ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.


“‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.


“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.


“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.


ಯಾವನಾದರೂ ಬಡವನಾಗಿ ನೇಮಕವಾದ ಹಣವನ್ನು ಕೊಡಲಾರದೆ ಹೋದರೆ, ಅವನು ಹರಕೆಮಾಡಿ ಪ್ರತಿಷ್ಠಿಸಿದ ಮನುಷ್ಯನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ಕೊಡಬೇಕಾದ ಹಣ ಇಷ್ಟೆಂದು ನಿರ್ಣಯಿಸಬೇಕು.


ಕುರಿಯನ್ನು ಕೊಡುವುದಕ್ಕೆ ಗತಿಯಿಲ್ಲದಿದ್ದರೆ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು’” ಎಂಬುದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು