ಯಾಜಕಕಾಂಡ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೈವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕ ಯಜ್ಞ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಯಾಜಕನ ಬಳಿಗೆ ಅದನ್ನು ತಂದನಂತರ ಅದು ದೇವಾರ್ಪಿತವೆಂದು ಸೂಚಿಸುವದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಯಜ್ಞವೇದಿಯಲ್ಲಿ ಹೋಮಮಾಡಬೇಕು; ಅದು ದೋಷಪರಿಹಾರಕಯಜ್ಞ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನು ಹಿಟ್ಟನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಒಂದು ಹಿಡಿಹಿಟ್ಟನ್ನು ಅದರಿಂದ ತೆಗೆದು ದೇವಾರ್ಪಿತವಾಯಿತೆಂದು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿರುವುದು. ಅದು ಪಾಪಪರಿಹಾರಕ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು. ಅಧ್ಯಾಯವನ್ನು ನೋಡಿ |