ಯಾಜಕಕಾಂಡ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವದು. ನೈವೇದ್ಯದ್ರವ್ಯದಲ್ಲಿ ವಿುಕ್ಕದ್ದು ಹೇಗೆ ಯಾಜಕನಿಗೆ ಆಗುತ್ತದೋ ಇದರಲ್ಲಿಯೂ ವಿುಕ್ಕದ್ದು ಯಾಜಕನಿಗೆ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೀಗೆ ಆ ವ್ಯಕ್ತಿಯನ್ನು ಅವನ ದೋಷಗಳಿಂದ ಶುದ್ಧೀಕರಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು. ಧಾನ್ಯನೈವೇದ್ಯದಲ್ಲಿರುವಂತೆಯೇ ಯಜ್ಞದಲ್ಲಿ ಉಳಿದ ಭಾಗವು ಯಾಜಕನಿಗೆ ಸೇರಿದೆ. ಧಾನ್ಯಸಮರ್ಪಣೆಯಲ್ಲಿಯೂ ಉಳಿದ ಭಾಗವು ಯಾಜಕನಿಗೆ ಸೇರಿದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ” ಅಧ್ಯಾಯವನ್ನು ನೋಡಿ |