Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:15
33 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ ‘ಯಾರೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಿಯಾದರೆ ಅವನಿಗೆ ದೋಷಪರಿಹಾರ ಮಾಡಿಕೊಳ್ಳುವ ಕ್ರಮ ಹೀಗಿದೆ.


ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈ ಮುಟ್ಟಿ ಪ್ರಮಾಣಮಾಡಿ ತಾವು ಅಪರಾಧಿಗಳೆಂದು ಒಪ್ಪಿಕೊಂಡು ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


“‘ಪ್ರಾಯಶ್ಚಿತ್ತಯಜ್ಞದ ನಿಯಮಗಳು: ಆ ಯಜ್ಞವು ಮಹಾಪರಿಶುದ್ಧವಾದದ್ದು.


ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.


ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


“ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.


ಅವನು ಪ್ರಾಯಶ್ಚಿತ್ತಕ್ಕಾಗಿ ಹಿಂಡಿನಿಂದ ಯೋಗ್ಯವಾಗಿ ತೋರುವ ಪೂರ್ಣಾಂಗವಾದ ಟಗರನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವನು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಬೇಕು; ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.


ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು