Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಅಥವಾ ಕೇಡಿಗಾಗಲಿ ಯಾವುದಾದರೂ ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವನಾದರೂ ಆಲೋಚಿಸದೆ ಮೇಲಿಗಾಗಲಿ ಕೇಡಿಗಾಗಲಿ ಯಾವದಾದರೂ ಆಣೆಯಿಟ್ಟುಕೊಂಡರೆ ಅದು ಅವನಿಗೆ ತಿಳಿಯದೆ ಹೋದರೂ ತಿಳಿದುಬಂದಾಗ ಅವನು ಇದರಿಂದಲೂ ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಒಬ್ಬನು ಆಲೋಚಿಸದೆ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಮಾತುಕೊಟ್ಟು ಮರೆತುಬಿಟ್ಟರೆ, ಅದು ಅವನ ನೆನಪಿಗೆ ಬಂದಾಗ ಅವನು ದೋಷಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:4
25 ತಿಳಿವುಗಳ ಹೋಲಿಕೆ  

ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.


ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.


ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.


ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.


ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.


ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.


ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು.


ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.


“ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,


ಮನುಷ್ಯದೇಹದಿಂದ ಉಂಟಾದ ಯಾವುದಾದರೂ ಒಂದು ಅಶುದ್ಧವಸ್ತು ತಗಲಿದ್ದು ಅವನಿಗೆ ತಿಳಿಯದೆ ಹೋದರೂ ಅದು ಅವನಿಗೆ ತಿಳಿದುಬಂದಾಗ ಅವನು ದೋಷಿಯಾಗುವನು.


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ, ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದನಂತರ ಅವನಿಗೆ ಕ್ಷಮಾಪಣೆಯಾಗುವುದು. ಧಾನ್ಯನೈವೇದ್ಯ ದ್ರವ್ಯದಲ್ಲಿ ಉಳಿದದ್ದು ಹೇಗೆ ಯಾಜಕನಿಗೆ ಸಲ್ಲುತ್ತದೋ ಇದರಲ್ಲಿಯೂ ಉಳಿದದ್ದು ಯಾಜಕನಿಗೆ ಸಲ್ಲಬೇಕು.’”


ಅವರು ದೇವರಾತ್ಮನಿಗೆ ವಿರುದ್ಧವಾಗಿ ನಿಂತಿದ್ದರಿಂದ, ಮೋಶೆ ದುಡುಕಿ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು