Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಆದರೆ ತಲೆಯನ್ನು ಪೂರ್ಣವಾಗಿ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು; ಅದರ ತಲೆಯನ್ನು ಪೂರಾ ತೆಗೆದು ಬಿಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಅವುಗಳನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಮೊದಲು ಒಂದು ಪಕ್ಷಿಯನ್ನು ದೋಷಪರಿಹಾರಕ ಯಜ್ಞವನ್ನಾಗಿ ಅರ್ಪಿಸುವನು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿಯುವನು. ಆದರೆ ಯಾಜಕನು ಪಕ್ಷಿಯನ್ನು ಎರಡು ಭಾಗಗಳನ್ನಾಗಿ ವಿಭಾಗಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:8
4 ತಿಳಿವುಗಳ ಹೋಲಿಕೆ  

ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು