Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿವಿುಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರಕಯಜ್ಞ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕನು ದೋಷಪರಿಹಾರಕ ಯಜ್ಞದಿಂದ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬದಿಯಲ್ಲಿ ಚಿಮಿಕಿಸಬೇಕು. ಬಳಿಕ ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು. ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 5:9
12 ತಿಳಿವುಗಳ ಹೋಲಿಕೆ  

ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ, ಹೋರಿಯ ಉಳಿದ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ಸರ್ವಾಂಗಹೋಮಪಶುವನ್ನು ವಧಿಸುವ ಸ್ಥಳದಲ್ಲೇ ಪ್ರಾಯಶ್ಚಿತ್ತಯಜ್ಞದ ಪಶುವನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು