Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧಾನ್ಯನೈವೇದ್ಯ ವಿಷಯವಾದ ನಿಯಮಗಳು. ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:14
12 ತಿಳಿವುಗಳ ಹೋಲಿಕೆ  

ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.


ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.


ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.


“‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,


ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.


ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.


ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು