Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆರೋನನಿಗೆ ಅಭಿಷೇಕವಾದ ದಿನ ಮೊದಲ್ಗೊಂಡು ಅವನೂ ಅವನ ವಂಶಜರೂ ಸರ್ವೇಶ್ವರನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯದ ಕ್ರಮ ಇದು: ಅವರು ದಿನನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಬೆಳಿಗ್ಗೆ ಅರ್ಧ, ಸಂಜೆ ಅರ್ಧ, ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯಕ್ರಮ ಹೇಗಂದರೆ - ಅವರು ನಿತ್ಯವೂ ಮೂರು ಸೇರು ಗೋದಿ ಹಿಟ್ಟನ್ನು, ಹೊತ್ತಾರೆ ಅರ್ಧವನ್ನೂ ಸಾಯಂಕಾಲ ಅರ್ಧವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆರೋನನು ಮಹಾಯಾಜಕನಾಗಿ ಅಭಿಷೇಕಿಸಲ್ಪಡುವ ದಿನದಂದು ಅವನು ಮತ್ತು ಅವನ ಪುತ್ರರು ಯೆಹೋವನ ಸನ್ನಿಧಿಗೆ ತರಬೇಕಾದ ಧಾನ್ಯಸಮರ್ಪಣೆ ಇದಾಗಿದೆ. ಅವರು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯನೈವೇದ್ಯಕ್ಕಾಗಿ ತರಬೇಕು. (ದಿನನಿತ್ಯದ ನೈವೇದ್ಯಗಳ ಸಮಯಗಳಲ್ಲಿ ಇದನ್ನು ಅರ್ಪಿಸಬೇಕು.) ಅವರು ಇದರಲ್ಲಿ ಅರ್ಧದಷ್ಟನ್ನು ಮುಂಜಾನೆಯಲ್ಲಿ ಮತ್ತು ಉಳಿದರ್ಧವನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:20
17 ತಿಳಿವುಗಳ ಹೋಲಿಕೆ  

ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,


ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.


ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.


ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,


ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,


ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು