Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಆರೋನನಿಗೂ ಅವನ ವಂಶದವರಿಗೂ ಹೀಗೆ ಆಜ್ಞಾಪಿಸು - ದೋಷಪರಿಹಾರಕ ಯಜ್ಞನಿಯಮಗಳು. ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನೂ ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಹೇಳು: ಪಾಪಪರಿಹಾರಕ ಯಜ್ಞದ ಕಟ್ಟಳೆ ಇದಾಗಿದೆ. ಸರ್ವಾಂಗಹೋಮ ಪಶುವು ವಧಿಸಲ್ಪಡುವ ಸ್ಥಳದಲ್ಲಿಯೇ ಪಾಪಪರಿಹಾರಕ ಯಜ್ಞಪಶುವು ಯೆಹೋವನ ಸನ್ನಿಧಿಯಲ್ಲಿ ವಧಿಸಲ್ಪಡಬೇಕು. ಅದು ಮಹಾ ಪವಿತ್ರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:25
13 ತಿಳಿವುಗಳ ಹೋಲಿಕೆ  

ಅವನು ಆ ಹೋತದ ತಲೆಯ ಮೇಲೆ ಕೈಯನ್ನಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಯಜ್ಞ.


ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟನಂತರ ಸರ್ವಾಂಗಹೋಮದ ಪಶುಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.


“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.


“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.


ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,


ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.


ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು