ಯಾಜಕಕಾಂಡ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲಾ ಪರಿಶುದ್ಧವಾಗುವದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಪಾಪಪರಿಹಾರಕ ಯಜ್ಞದ ಮಾಂಸವು ತಗಲಿದ ವಸ್ತುವೂ ಪವಿತ್ರವಾಗುತ್ತದೆ; ಮುಟ್ಟುವ ವ್ಯಕ್ತಿಯೂ ಪವಿತ್ರವಾಗುವನು. “ಚಿಮಿಕಿಸಲ್ಪಟ್ಟ ರಕ್ತದಲ್ಲಿ ಸ್ವಲ್ಪ ರಕ್ತವು ಯಾರ ಬಟ್ಟೆಯ ಮೇಲಾದರೂ ಬಿದ್ದರೆ, ನೀವು ಆ ಬಟ್ಟೆಗಳನ್ನು ಪವಿತ್ರಸ್ಥಳದಲ್ಲಿ ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. ಅಧ್ಯಾಯವನ್ನು ನೋಡಿ |
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.