ಯಾಜಕಕಾಂಡ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮತ್ತೊಬ್ಬನು ಕಳಕೊಂಡದ್ದನ್ನು ತಾನು ಕಂಡು ಬೊಂಕಿ ಸುಳ್ಳಾಣೆಯಿಟ್ಟದ್ದರಿಂದಲೋ ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.