Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀನು ಆರೋನನಿಗೂ ಅವನ ವಂಶದವರಿಗೂ ಈ ಕೆಳಕಂಡ ದಹನ ಬಲಿಯ ಈ ನಿಯಮಗಳನ್ನು ಆಜ್ಞಾಪಿಸು: ದಹನ ಬಲಿ ದ್ರವ್ಯವು ರಾತ್ರಿಯೆಲ್ಲಾ, ಮರುದಿನದ ಬೆಳಗಿನವರೆಗೂ ಬಲಿಪೀಠದ ಮೇಲೆ ಉರಿಯುತ್ತಿರಬೇಕು. ಅದರಿಂದಲೇ ಬಲಿಪೀಠದ ಮೇಲಿನ ಬೆಂಕಿ ಹೊತ್ತಿ ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:9
10 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.


“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.


ಅನಂತರ ಯೆಹೋವನು ಮೋಶೆಗೆ,


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.


ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,


ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು