Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:12
25 ತಿಳಿವುಗಳ ಹೋಲಿಕೆ  

ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.


“‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,


ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.


ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


“ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.


ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.


ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು