ಯಾಜಕಕಾಂಡ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೃತಜ್ಞತಾಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ಉಳಿಸಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಮಾಧಾನಯಜ್ಞದ ಮಾಂಸವನ್ನು ಅದು ಸಮರ್ಪಣೆಯಾದ ದಿನದಲ್ಲಿಯೇ ತಿನ್ನಬೇಕು. ಒಬ್ಬನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಈ ಕಾಣಿಕೆಯನ್ನು ಅರ್ಪಿಸುತ್ತಾನೆ. ಅದರ ಮಾಂಸದಲ್ಲಿ ಮರುದಿನದ ಮುಂಜಾನೆಯವರೆಗೆ ಏನೂ ಉಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು. ಅಧ್ಯಾಯವನ್ನು ನೋಡಿ |