ಯಾಜಕಕಾಂಡ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. ಅಧ್ಯಾಯವನ್ನು ನೋಡಿ |