Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಶುದ್ಧವಾಗಿರುವವರೆಲ್ಲರು ಬಲಿಪ್ರಾಣಿಯ ಮಾಂಸವನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಒಬ್ಬನು ಅಶುದ್ಧನಾಗಿದ್ದು ಯೆಹೋವನಿಗೆ ಸೇರಿದ ಸಮಾಧಾನ ಸಮರ್ಪಣೆಗಳ ಮಾಂಸವನ್ನು ತಿಂದರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:20
16 ತಿಳಿವುಗಳ ಹೋಲಿಕೆ  

ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.


ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”


ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.


ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.


ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”


ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.


ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು, ನನ್ನ ದೇವಸ್ಥಾನವನ್ನು ಅಶುದ್ಧಮಾಡಿ, ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದರೆ, ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು