ಯಾಜಕಕಾಂಡ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಒಬ್ಬನಿಗೆ ಮನುಷ್ಯದೇಹದಿಂದ ಆಗಿರುವ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧ ವಸ್ತು ಇವುಗಳಲ್ಲಿ ಯಾವುದಾದರೂ ಸ್ಪರ್ಶವಾಗಿದ್ದರೆ ಅವನು ಅಶುದ್ಧನಾಗಿದ್ದಾನೆ. ಅವನು ಯೆಹೋವನಿಗೆ ಸೇರಿದ ಸಮಾಧಾನಯಜ್ಞಗಳ ಮಾಂಸವನ್ನು ತಿಂದರೆ, ಅವನನ್ನು ಕುಲದಿಂದ ತೆಗೆದುಹಾಕಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು. ಅಧ್ಯಾಯವನ್ನು ನೋಡಿ |