ಯಾಜಕಕಾಂಡ 7:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. [ಮೋಶೆ] ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ. ಅಧ್ಯಾಯವನ್ನು ನೋಡಿ |