Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:6
11 ತಿಳಿವುಗಳ ಹೋಲಿಕೆ  

ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.


ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.


ದೇವಾಲಯದಲ್ಲಿ ಸೇವೆ ಸಲ್ಲಿಸುವವರು ದೇವಾಲಯದಿಂದ ತಮ್ಮ ಬದುಕನ್ನು ಸಾಗಿಸಬೇಕೆಂದೂ ಮತ್ತು ಯಜ್ಞವೇದಿಯ ಬಳಿ ಸೇವೆಮಾಡುವವರು ಆ ವೇದಿಗೆ ಬರುವ ಪದಾರ್ಥಗಳಲ್ಲಿ ಪಾಲುಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅದು ಪ್ರಾಯಶ್ಚಿತ್ತ ಯಜ್ಞವಾಗಿದೆ.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.


ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು