ಯಾಜಕಕಾಂಡ 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬಳಿಕ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಕಿಂಚಿತ್ತನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗು ಹಾಗು ಬಲಗಾಲಿನ ಹೆಬ್ಬೆಟ್ಟಿಗು ಹಚ್ಚಿದನು. ಉಳಿದ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ ಉಳಿದ ರಕ್ತವನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು. ಅಧ್ಯಾಯವನ್ನು ನೋಡಿ |