ಯಾಜಕಕಾಂಡ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸರ್ವೇಶ್ವರನ ಸನ್ನಿಧಿಯಲ್ಲಿ ಬುಟ್ಟಿಯಲ್ಲಿಟ್ಟಿದ್ದ ಹುಳಿಯಿಲ್ಲದ ತಿಂಡಿಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲ ತೊಡೆಯ ಮೇಲೆ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು. ಅಧ್ಯಾಯವನ್ನು ನೋಡಿ |