Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:29
6 ತಿಳಿವುಗಳ ಹೋಲಿಕೆ  

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು