Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ, ಈ ನಿಮ್ಮ ಯಾಜಕ ಸೇವಾವೃತ್ತಿಯ ದೀಕ್ಷೆಯನ್ನು ಪೂರೈಸುವುದಕ್ಕೆ ಏಳು ದಿವಸ ಹಿಡಿಯುವುದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವದಕ್ಕೆ ಏಳು ದಿವಸ ಹಿಡಿಯುವದಾದದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಲಿನ ಆಚೆಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:33
7 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.


ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.


ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.


ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು