ಯಾಜಕಕಾಂಡ 8:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು. ಅಧ್ಯಾಯವನ್ನು ನೋಡಿ |