Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದನ್ನೆಲ್ಲಾ ಆರೋನ ಮತ್ತು ಅವನ ಮಕ್ಕಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದ್ದನ್ನೆಲ್ಲಾ ಆರೋನನೂ ಅವನ ಮಕ್ಕಳೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಆರೋನನೂ ಅವನ ಪುತ್ರರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಹೀಗೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ, ಆರೋನನೂ, ಅವನ ಪುತ್ರರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:36
8 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅವರು ಮಾಡಿದ್ದ ಕೆಲಸವನ್ನು ಮೋಶೆಯು ಪರೀಕ್ಷಿಸಿ ನೋಡಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.


ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.


ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು