Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:24
24 ತಿಳಿವುಗಳ ಹೋಲಿಕೆ  

ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ಅಲ್ಲಿ ದಾವೀದನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿ, ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ, ಆಕಾಶದಿಂದ ಯಜ್ಞವೇದಿಯ ಮೇಲೆ ಬೆಂಕಿಯನ್ನು ಸುರಿಸಿ,


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.


ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.


ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.


ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.


ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,


ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು