Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮ ಅನ್ಯೋನ್ಯತೆಯ ಭೋಜನದಲ್ಲಿ ಈ ಜನರು ಮುಳುಗಿಹೋದ ಬಂಡೆಗಳಂತಿದ್ದಾರೆ. ಅವರು ಭಯವಿಲ್ಲದೆ ನಿಮ್ಮ ಜೊತೆಯಲ್ಲಿ ತಿನ್ನುತ್ತಾರೆ. ಅವರು ತಮ್ಮ ಬಗ್ಗೆ ಮಾತ್ರ ಚಿಂತಿಸುವ ಕುರುಬರಾಗಿದ್ದಾರೆ. ಅವರು ನೀರಿಲ್ಲದ ಮೋಡಗಳಂತಿದ್ದಾರೆ. ಗಾಳಿಯು ಆ ಮೋಡಗಳನ್ನು ಬಡಿದುಕೊಂಡು ಹೋಗುವುದು. ಅವರು ಕಾಲಕ್ಕೆ ತಕ್ಕಂತೆ ಫಲಬಿಡದ ಮತ್ತು ಬೇರುಸಹಿತ ಕಿತ್ತುಬಂದು ಉರುಳಿಹೋದ ಮರಗಳಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆನಿ ತುಮ್ಚ್ಯಾ ಎಕ್ವಟಾಚೆ ಜೆವ್ನಾತ್ ತುಮ್ಚ್ಯಾ ವಾಂಗ್ಡಾ ಕಾಯ್ ಬಿ ಭಿಂಯೆ ನಸ್ತಾನಾ ಖಾತಾತ್ ಫಿತಾತ್ ಅನಿ ಅಪ್ನಾಚಿ ಪೊಟಾ ಭರುನ್ಗೆತಾತ್, ತೆನಿ ವಾರ್ಯಾಚ್ಯಾ ವಾಂಗ್ಡಾ ಹುಡುನ್ ಜಾತಲ್ಲ್ಯಾ ಪಾನಿ ನಸಲ್ಲ್ಯಾ ಮೊಡಾಂಚ್ಯಾ ಸಾರ್ಕೆ, ತೆನಿ ಕಾಲಾ ಕಾಲಾಕ್ ಫಳ್ ದಿನಸಲ್ಲ್ಯಾ ಝಾಡಾ ಸಾರ್ಕೆ, ಮುಳಾ ಸಮೆತ್ ಉಪ್ಳುನ್ ಪಡಲ್ಲ್ಯಾ ವಾಳುನ್ ಗೆಲ್ಲ್ಯಾ ಝಾಡಾ ಸಾರ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:12
35 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಬರೀ ಗಾಳಿಯ ಮೋಡಗಳು ಹೇಗೋ, ದಾನಕೊಡುತ್ತೇನೆಂದು ಸುಳ್ಳಾಡಿ ಜಂಬಮಾಡುವವನೂ ಹಾಗೆಯೇ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.


ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.


“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.


ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,


ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


(ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.


ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.


(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು