Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಆಗಿಚ್ಯಾ ತೊಂಡಾತ್ ಹೊತ್ತ್ಯಾಕ್ನಿ ವೊಡುನ್ ಘೆವ್ನ್ ತೆಂಕಾ ಆಗಿತ್ನಾ ಹುರ್ವುನ್ ಘೆವಾ. ಭಿಂಯಾ ವೈನಾ ದಯಾ ದಾಕ್ವಾ ಖರೆ ಆಂಗಾ ಮಾಸಾಚ್ಯಾ ಚಲ್ನುಕಿ ವೈನಾ ಮ್ಹೆಳಲ್ಲೆ ಕಪ್ಡೆ ಧುರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:23
21 ತಿಳಿವುಗಳ ಹೋಲಿಕೆ  

ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.


ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.


ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,


ಅವನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು