Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:1
23 ತಿಳಿವುಗಳ ಹೋಲಿಕೆ  

ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಬೆನ್ಯಾಮೀನನ ಕುಲದಿಂದ ಗೆಬ, ಅಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಒಟ್ಟು ಪಟ್ಟಣಗಳು ಹದಿಮೂರು.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.


ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಕಂಡು ಬಂದ ದೈವೋಕ್ತಿ ಇದೇ.


ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,


ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.


ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.


ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.


ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!


ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ಅನಾತೋತ್ ಊರಿನವರು 128


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,


ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು