Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ನನಗೆ - ಸರಿಯಾಗಿ ನೋಡಿದ್ದೀ, ನನ್ನ ಮಾತನ್ನು ನೆರವೇರಿಸುವದಕ್ಕೆ ಎಚ್ಚರಗೊಂಡಿದ್ದೇನೆ ಎಂದು ತಿಳಿದುಕೋ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನ್ನ ಮಾತನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೊ ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:12
15 ತಿಳಿವುಗಳ ಹೋಲಿಕೆ  

“ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.


ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;


ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು