ಯೆರೆಮೀಯ 1:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇನ್ನೊಂದು ಸಲ ಯೆಹೋವನು ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು - ಉರಿಸುತ್ತಿರುವ ಬೆಂಕಿಯಿಂದುಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಬಡಗಲಿಂದ ಇತ್ತ ಬಾಗಿಕೊಂಡಿದೆ ಅಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಇನ್ನೊಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಆ ಹಂಡೆಯು ಉತ್ತರದಿಂದ ಈ ಕಡೆಗೆ ಬಾಗಿಕೊಂಡಿದೆ” ಎಂದು ಉತ್ತರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು. ಅಧ್ಯಾಯವನ್ನು ನೋಡಿ |