ಯೆರೆಮೀಯ 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು. ಅಧ್ಯಾಯವನ್ನು ನೋಡಿ |