Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನನ್ನ ಜನರ ವಿರುದ್ಧ ನನ್ನ ನ್ಯಾಯನಿರ್ಣಯವನ್ನು ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನ್ನ ವಿರೋಧಿಗಳಾಗಿದ್ದಾರೆ. ನನ್ನ ಜನರು ನನ್ನನ್ನು ತ್ಯಜಿಸಿದ್ದಾರೆ. ಅವರು ನನ್ನನ್ನು ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನ್ನು ಪೂಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:16
44 ತಿಳಿವುಗಳ ಹೋಲಿಕೆ  

“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು.


ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,


ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.


ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.


ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.


ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಇವರು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡುವುದನ್ನು ನೀನು ನೋಡಲಿಲ್ಲವೋ?


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು