Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:12
38 ತಿಳಿವುಗಳ ಹೋಲಿಕೆ  

ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ಯೆಹೋವನು ಜ್ಞಾನದ ಮೂಲಕ ಭೂಮಿಯನ್ನು ಸ್ಥಾಪಿಸಿ, ವಿವೇಕದ ಮುಖಾಂತರ ಆಕಾಶಮಂಡಲವನ್ನು ಸ್ಥಿರಪಡಿಸಿದನು.


ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.


ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.


ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.


ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.


ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು. ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.


ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.


ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.


ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.


ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?


“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.


ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು