ಯೆರೆಮೀಯ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ. ಅಧ್ಯಾಯವನ್ನು ನೋಡಿ |